ಮೆಟಲ್ ಗ್ಯಾಸ್ ಬ್ಲಾಸ್ಟ್: ಇಬ್ಬರು ಕಾರ್ಮಿಕರು ಬಲಿ

Prasthutha|

ನೆಲಮಂಗಲ: ಮೆಟಲ್ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆ ಎಸ್ಕೆ ಸ್ಟೀಲ್ ಕಂಪನಿಯಲ್ಲಿ ನಡೆದಿದೆ.

- Advertisement -


ಬಿಹಾರ ಮೂಲದ ಅಶೋಕ್ ಕುಮಾರ್ (49), ಒಡಿಶಾ ಮೂಲದ ಮುಖೇಶ್ ಕುಮಾರ್(33) ಸಾವನ್ನಪ್ಪಿದ ಕಾರ್ಮಿಕರು. ಘಟನೆಯಲ್ಲಿ ಸುಶೀಲ್ ಕುಮಾರ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಪನಿಯ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.


ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.

Join Whatsapp
Exit mobile version