ಉತ್ತರಪ್ರದೇಶ: ನಾಮಪತ್ರ ಸಲ್ಲಿಸಲು ಆಗಮಿಸಿದ ಮಹಿಳೆಯ ವಸ್ತ್ರಾಪಹರಣ!

Prasthutha: July 8, 2021

ಲಖ್ನೋ: ಉತ್ತರಪ್ರದೇಶದ ಸ್ಥಳೀಯ ಸಂಸ್ಥೆ ಚುಣಾವಣೆಯ ನಾಮಪತ್ರ ಸಲ್ಲಿಸಲು ಆಗಮಿಸಿದ ಮಹಿಳೆಯ ಮೇಲೆ ಇಬ್ಬರು ಯುವಕರು ದಾಳಿ ನಡೆಸಿ ಸೀರೆ ಎಳೆದ ಘಟನೆ ನಡೆದಿದೆ. ದುಷ್ಕರ್ಮಿಗಳು ಮಹಿಳೆಯ ವಸ್ತ್ರ ಎಳೆಯುವ ವೀಡಿಯೋ ವೈರಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ನಾಮಪತ್ರ ಸಲ್ಲಿಸಲು ಅಭ್ಯರ್ಥಿಯೊಬ್ಬರ ಜೊತೆಗೆ ಆಗಮಿಸಿದ್ದ ಮಹಿಳೆ ಸಮಾಜವಾದಿ ಪಕ್ಷದ ಬೆಂಬಲಿತೆ ಎಂದು ತಿಳಿದುಬಂದಿದೆ.

ವೀಡಿಯೋ ವೀಕ್ಷಿಸಿ….

“825 ಬ್ಲಾಕ್‌ ಪಂಚಾಯತ್ ಮುಖಂಡರನ್ನು ಆಯ್ಕೆ ಮಾಡುವ ಚುನಾವಣೆಯು ಶನಿವಾರ ನಡೆಯಲಿದೆ. ನಾಮಪತ್ರ ಸಲ್ಲಿಸಲು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದಾಗ್ಯೂ 14 ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದೆ. ಗುಂಪುಗಳ ನಡುವೆ ನಡೆದಿರುವ ಘರ್ಷಣೆಯ ವರದಿಗಳು ನಮ್ಮಲ್ಲಿವೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಅಧಿಕಾರಿ ಪ್ರಶಾಂತ್‌ ಕುಮಾರ್ ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ