ಬೈಕ್’ಗೆ ಟಿಪ್ಪರ್ ಡಿಕ್ಕಿ: ಇಬ್ಬರು ಯುವಕರು ಮೃತ್ಯು

Prasthutha|

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪುಲಿಕೇಶಿ ನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಬೈಕ್ ನಲ್ಲಿದ್ದ ಯೂಸುಫ್(19), ಫರಝ್ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಈ ಇಬ್ಬರು ಮೃತ ಯುವಕರು ಹೊರರಾಜ್ಯದ ನಿವಾಸಿಗಳಾಗಿದ್ದು, ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯರಾತ್ರಿ 2 ಗಂಟೆಯಲ್ಲಿ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಸಂಚಾರಿ ನಿಯಮ ಉಲ್ಲಂಘಿಸಿ ಟಿಪ್ಪರ್ ಚಾಲಕ ಒನ್ ವೇನಲ್ಲಿ ಬಂದಿದ್ದಾನೆ. ಈ ವೇಳೆ ಅಪಘಾತ ಸಂಭವಿಸಿದೆ. ಇನ್ನು ಟಿಪ್ಪರ್ ಲಾರಿ ಚಾಲಕ ಸುನೀಲ್ ಎಂಬುವವನನ್ನು ಸಂಚಾರಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.

Join Whatsapp