ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್

Prasthutha|

ಕೋಲಾರ: ಇವಿಎಂ ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದಲ್ಲಿ ನಡೆದಿದೆ.

- Advertisement -

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ವಡಗೂರ್ ಗೇಟ್ ಬಳಿ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗಿದೆ. ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.



Join Whatsapp