ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತ ಪಟ್ಟವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಮಹಿಳೆಯರು ಸೇರಿದಂತೆ ಕನಿಷ್ಠ 107 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್ ಪ್ರದೇಶದ ರತಿ ಭಾನ್ಪುರ್ ಗ್ರಾಮದಲ್ಲಿ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಭೋಲೆ ಬಾಬಾ ತಮ್ಮ ಸತ್ಸಂಗ ಕಾರ್ಯಕ್ರಮದಲ್ಲಿ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಸ್ಥಳದಲ್ಲಿನ ಉಸಿರುಗಟ್ಟುವಿಕೆಯಿಂದಾಗಿ ‘ಸತ್ಸಂಗ’ದಲ್ಲಿ ಭಾಗವಹಿಸಿದ್ದ ಜನರಲ್ಲಿ ಅಸ್ವಸ್ಥತೆಗೆ ಕಾರಣವಾದ ನಂತರ ಜನರು ಓಡಲು ಪ್ರಾರಂಭಿಸಿದರು. ಇದು ಕಾಲ್ತುಳಿತಕ್ಕೆ ಕಾರಣವಾಯಿತು ಎನ್ನಲಾಗಿದೆ.