ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸುವ ಸಂಘಟನೆಗಳ ವಿರುದ್ಧ ಕ್ರಮ ಆಗಬೇಕು: PFI ಮೇಲಿನ ದಾಳಿಯ ಕುರಿತು ಯು.ಟಿ. ಖಾದರ್ ಪ್ರತಿಕ್ರಿಯೆ

Prasthutha|

ಮಂಗಳೂರು:  ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಶಾಸಕ ಹೇಳಿದ್ದಾರೆ.

- Advertisement -

PFI ಕಚೇರಿಗಳ ಮೇಲೆ NIA ದಾಳಿ ಮತ್ತು ನಾಯಕರ ಬಂಧನದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆಯ ವಿರುದ್ಧ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತವಿದೆ. ಕಾನೂನು ಕೈಗೆತ್ತಿಕೊಳ್ಳುವವರನ್ನು ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿ. ಶಾಂತಿ ಸೌಹಾರ್ದತೆಯ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಬೇಕು. ಈ ಬಗ್ಗೆ  ಯಾವುದೇ ತಾರತಮ್ಯ ಮಾಡದೇ ಸರ್ಕಾರ ಕ್ರಮ ಕೈಗೊಳ್ಳಲಿ  ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಎಲ್ಲರಿಗೂ ಒಂದೇ ರೀತಿಯ ನ್ಯಾಯ ಕೊಟ್ಟರೆ ಎಲ್ಲರೂ ಬೆಂಬಲಿಸುತ್ತಾರೆ. ನಿರಪರಾಧಿಗಳಿಗೆ ಅನ್ಯಾಯ ಆಗದಿದ್ದರೆ ಸರ್ಕಾರವನ್ನು ಎಲ್ಲರೂ ಬೆಂಬಲಿಸುತ್ತಾರೆ. ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿಯ ಬಗ್ಗೆ ಅಪಸ್ಪರ ಎತ್ತಿಲ್ಲ.

- Advertisement -

ಸದ್ಯ PFI ಅನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಯ ಬಗ್ಗೆ ನ್ಯಾಯಯುತ ತನಿಖೆಗೆ ನಮ್ಮ ಧರ್ಮದ ಜೊತೆಗೆ ಎಲ್ಲಾ ಧರ್ಮದವರು ಬೆಂಬಲ ಕೊಡುತ್ತಾರೆ. ಈ ಸಂಬಂಧ ಯಾರಿಗೂ ತಾರತಮ್ಯ ಮತ್ತು ಅನ್ಯಾಯ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯಾವ ಸಂಸ್ಥೆ ನಿಷೇಧ ಮಾಡಬೇಕು ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ದ್ವೇಷಾಧರಿತ ಮತ್ತು ಗಲಭೆ ಸೃಷ್ಟಿಸುವ ಕೆಲಸ ಆಗಿದ್ದರೆ ಎಲ್ಲಾ ಸಂಘಟನೆಗಳಿಗೂ ಒಂದು ಕಾನೂನನ್ನು ಜಾರಿಗೆ ತರಲಿ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.



Join Whatsapp