ಯುಎಇ ಉಪಾಧ್ಯಕ್ಷರಾಗಿ ಶೇಖ್ ಮನ್ಸೂರ್ ಬಿನ್ ಝಾಯೆದ್ ಅಲ್ ನಹ್ಯಾನ್ ನೇಮಕ

Prasthutha|

ಅಬುಧಾಬಿ: ಯುಎಇ ಉಪ ಪ್ರಧಾನ ಮಂತ್ರಿಯಾಗಿದ್ದ ಶೇಖ್ ಮನ್ಸೂರ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಯುಎಇಯ ಹೊಸ ಉಪಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ಈ ನೇಮಕಾತಿಯನ್ನು ಫೆಡರಲ್ ಸುಪ್ರೀಂ ಕೌನ್ಸಿಲ್ ಅನುಮೋದಿಸಿದೆ.

ಶೇಖ್ ಮನ್ಸೂರ್ ಅವರು ಇನ್ನು ಮುಂದೆ ಯುಎಇ ಉಪಾಧ್ಯಕ್ಷ, ಪ್ರಧಾನಮಂತ್ರಿ ಹಾಗೂ ದುಬೈ ಆಡಳಿತಗಾರನಾಗಿರುವ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರೊಂದಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

Join Whatsapp