ಕಾಬೂಲ್: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಫ್ಘಾನಿಸ್ತಾನಕ್ಕೆ 30 ಟನ್ ಆಹಾರ ಮತ್ತು ವೈದ್ಯಕೀಯ ಸಾಮಾಗ್ರಿಗಳನ್ನು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದೆ. ಬುಧವಾರ ಆಹಾರ ಮತ್ತು ವೈದ್ಯಕೀಯ ಸಾಮಾಗ್ರಿಗಳನ್ನು ಹೊಂದಿದ ವಿಮಾನ ಅಫ್ಘಾನ್ ರಾಜಧಾನಿ ಕಾಬೂಲ್ ನಲ್ಲಿ ಬಂದಿಳಿದಿದೆ ಎಂದು ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ತಿಳಿಸಿದ್ದಾರೆ.
ಯುಎಇ ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ಒದಗಿಸಿದ ಮೊದಲ ರಾಷ್ಟ್ರಗಳಲ್ಲೊಂದಾಗಿದೆ.
ವಿಶ್ವಸಂಸ್ಥೆಯ ಅಂಗವಾದ ಯುನಿಸೆಫ್ ಇತ್ತೀಚೆಗೆ ಬಿಡುಗಡೆಗೊಳಿಸಿದ ತನ್ನ ಹೇಳಿಕೆಯಲ್ಲಿ ಮುಂದಿನ ಒಂದು ತಿಂಗಳ ಒಳಗೆ ಅಫ್ಘಾನಿಸ್ತಾನದಲ್ಲಿ ಭಾರೀ ಆಹಾರ ಕೊರತೆ ಎದುರಿಸಲಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿತ್ತು. ಮಾತ್ರವಲ್ಲ ಅಫ್ಘಾನ್ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿದ್ದಾರೆಂದು ವಿಶ್ವವನ್ನು ಎಚ್ಚರಿಸಿತ್ತು.