ಯುಎಇ ಭಾರತೀಯರಿಗೆ ಅತ್ಯಂತ ಅಚ್ಚುಮೆಚ್ಚಿನ ಪ್ರವಾಸಿ ತಾಣ

Prasthutha: December 22, 2021

ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಭಾರತೀಯ ಪ್ರವಾಸಿಗರಿಗೆ ವಿಶ್ವದ ಅತ್ಯಂತ ಅಚ್ಚುಮೆಚ್ಚಿನ ತಾಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್ ಸಂಸತ್ತಿಗೆ ಸಲ್ಲಿಸಿದ ವರದಿಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.

2021 ರ ಮೊದಲ ತ್ರೈಮಾಸಿಕದಲ್ಲಿ 314, 495 ಭಾರತೀಯರು ಪ್ರವಾಸಿ ವೀಸಾದಲ್ಲಿ ಯುಎಇ ಗೆ ಪ್ರಯಾಣ ಬೆಳೆಸಿದ್ದಾರೆ. ಕೋವಿಡ್ – 19 ಸಾಂಕ್ರಾಮಿಕ ರೋಗ ಹಿಡಿತ ಸಾಧಿಸಲು ಪ್ರಾರಂಭಿಸಿದಾಗ ಮಾರ್ಚ್ 2020 ರಿಂದ ಈ ಅಂಕಿ ಅಂಶವು ಶೇಕಡಾ 50 ಕ್ಕಿಂತ ಹೆಚ್ಚಿನ ಹೆಚ್ಚಳವನ್ನು ತೋರಿಸಿದೆ.

ಕಳೆದ ವರ್ಷದ ಮೊದಲ ತ್ರೈಮಾಸಿಕದ ವೇಳೆ ಒಟ್ಟು 536,038 ಭಾರತೀಯರು ವಿದೇಶಕ್ಕೆ ತೆರಳಿದ್ದರು. ಈ ವರ್ಷ ಇದೇ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ 393, 374 ಕ್ಕೆ ಕುಸಿದಿದೆ. ಅದೇ ಸಮಯದಲ್ಲಿ ಭಾರತೀಯ ಯಾತ್ರಿಕರ ಯುಎಇ ಪ್ರವಾಸ ಶೇಕಡಾ 50 ಕ್ಕಿಂತ ಹೆಚ್ಚಿದೆ.

ಯುಎಇ ಬಳಿಕ ಥೈಲ್ಯಾಂಡ್ ಮತ್ತು ಬಾಂಗ್ಲಾದೇಶ ದೇಶಗಳು ಭಾರತೀಯರಿಗೆ ಜನಪ್ರಿಯ ಪ್ರವಾಸಿ ತಾಣಗಳಾಗಿವೆ ಎಂದು ಅಂಕಿಅಂಶಗಳು ತಿಳಿಸುತ್ತವೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!