ಯುಎಇ | ಅಬುಧಾಬಿಯ ಜಮೀನಿನಲ್ಲಿ ಗಾಂಜಾ ಬೆಳೆದ ಇಬ್ಬರ ಬಂಧನ

Prasthutha: July 20, 2022

ಅಬುಧಾಬಿ: ಅಬುಧಾಬಿಯಲ್ಲಿರುವ ತಮ್ಮ ಉದ್ಯೋಗದಾತನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಬುಧಾಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಈ ಮಧ್ಯೆ ಗಾಂಜಾ ಗಿಡಗಳನ್ನು ಶೇಖರಿಸದಂತೆ ಮತ್ತು ನಾಶಪಡಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.

ತೋಟದ ಮಾಲಕರು ನಿತ್ಯ ತನ್ನ ಜಮೀನಿಗೆ ಹೋಗುತ್ತಿರಲಿಲ್ಲ ಎಂದು ತನಿಖೆಯಿಂದ ಬಹಿರಂಗವಾಗಿದ್ದು, ಇದರ ದುರ್ಲಾಭ ಪಡೆದ ಈ ಇಬ್ಬರು ಕಾರ್ಮಿಕರು ತೋಟದ ಒಂದು ಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಲು ಪ್ರಾರಂಭಿಸಿದ್ದರು.

ತೋಟದ ಮಾಲಕರು ತಮ್ಮ ಕಾರ್ಮಿಕರ ಮೇಲೆ ಪ್ರತಿನಿತ್ಯ ನಿಗಾ ವಹಿಸಲು ಮತ್ತು ಕಟ್ಟುನಿಟ್ಟಿನ ಸೂಚನೆ ನೀಡಲು ಮಾದಕ ದ್ರವ್ಯ ವಿರೋಧಿ ನಿರ್ದೇಶನಾಲಯದ ಮುಖ್ಯಸ್ಥ ಬ್ರಿಗೇಡಿಯರ್ ಜನರಲ್ ತಾಹೆರ್ ಘರೀಬ್ ಅಲ್ ಧಾಹೇರಿ ಆದೇಶ ನೀಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ