ಲಕ್ನೋ: ಯುಎಪಿಎ ಸುಳ್ಳಾರೋಪದಡಿಯಲ್ಲಿ ಬಂಧನದಲ್ಲಿರುವ ವಿದ್ಯಾರ್ಥಿ ನಾಯಕ ಅತೀಕುರ್ರಹ್ಮಾನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.
ಕಳೆದ ಒಂದು ವಾರದಿಂದ ಆಗ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತೀಕುರ್ರಹ್ಮಾನ್ ಲಕ್ನೋ ವಿಶೇಷ ನ್ಯಾಯಾಲಯ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಏಮ್ಸ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆಗೊಳಿಸಲಾಗಿದೆ.
ನ್ಯಾಯಾಲಯದ ಆದೇಶ ಪ್ರತಿ ಲಭಿಸಿದ ತಕ್ಷಣ ಅವರನ್ನು ಜೈಲಿಗೆ ಸ್ಥಳಾಂತರಿಸಲಾಗುವುದೆಂದು ಜೈಲು ಅಧೀಕ್ಷಕ ಬ್ರಿಜೇಶ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ ಅತೀಕುರ್ರಹ್ಮಾನ್ ಅವರನ್ನು ಹತ್ರಾಸ್ ಷಡ್ಯಂತ್ರದಲ್ಲಿ ಸಿಲುಕಿಸಿ ಯುಎಪಿಎ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇವರೊಂದಿಗೆ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು. ವಿದ್ಯಾರ್ಥಿ ನಾಯಕ ಅತೀಕ್ ಉರ್ ರಹ್ಮಾನ್ ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ.