Home ಟಾಪ್ ಸುದ್ದಿಗಳು ವಿಶ್ವಕಪ್ ಟಿ 20 ಕ್ರಿಕೆಟ್: ಪಾಕ್ ಗೆ ಬೆಂಬಲ ನೀಡಿದ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ

ವಿಶ್ವಕಪ್ ಟಿ 20 ಕ್ರಿಕೆಟ್: ಪಾಕ್ ಗೆ ಬೆಂಬಲ ನೀಡಿದ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ

ಶ್ರೀನಗರ: ಭಾರತ ಪಾಕಿಸ್ತಾನ ನಡುವಿನ ಟಿ 20 ಕ್ರಿಕೆಟ್ ಪಂದ್ಯಾಟದಲ್ಲಿ ಪಾಕ್ ತಂಡವನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಜಮ್ಮು , ಕಾಶ್ಮೀರ ಪೊಲೀಸರು ಯುಎಪಿಎ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀನಗರ ಸ್ಕಿಮ್ಸ್ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ದುಬೈನಲ್ಲಿ ನಡೆಯುತ್ತಿರುವ ವಿಶ್ವಕಪ್ ಟಿ 20 ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾನುವಾರ ನಡೆದ ಹೈವೋಲ್ಟ್ ಪಂದ್ಯಾಟದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಸಂದರ್ಭದಲ್ಲಿ ಪಾಕಿಸ್ತಾನ ತಂಡವನ್ನು ಬೆಂಬಲಿಸಿದ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version