ತಾಲಿಬಾನ್ ಪರ ಪೋಸ್ಟ್: ಆರೋಪಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ

Prasthutha|

ಗುವಾಹಟಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಿದ್ದನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಕ್ಕಾಗಿ ಅಸ್ಸಾಂ ಪೊಲೀಸರಿಂದ ಬಂಧಿತರಾದ 16 ಮಂದಿಯ ಪೈಕಿ 14 ಮಂದಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ 15 ಆರೋಪಿಗಳನ್ನು ಯುಎಪಿಎ ಕಾನೂನಿನಡಿಯಲ್ಲಿ ಬಂಧಿಸಲಾಗಿತ್ತು. ಈ ಎಲ್ಲಾ ಆರೋಪಿಗಳನ್ನು ಜೈಲಿನಲ್ಲಿಡಲು ಯಾವುದೇ ಆಧಾರಗಳಿಲ್ಲದ ನಿಟ್ಟಿನಲ್ಲಿ ಜಾಮೀನು ನೀಡಲಾಗಿದೆ ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ.
ಈ ಸಂಬಂಧ ಅಸ್ಸಾಂ ವಿಶೇಷ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಿ ಪಿ ಸಿಂಗ್ ಆಗಸ್ಟ್ 14 ರಂದು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು.

ಅಫ್ಘಾನಿಸ್ತಾನದ ಪರ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ಜಾಮೀನು ಮಂಜೂರು ಮಾಡಿದ್ದು, ಇನ್ನಿಬ್ಬರ ಜಾಮೀನು ಅರ್ಜಿಯನ್ನು ಧುಬ್ರಿ ಸೆಷನ್ ಕೋರ್ಟ್ ತಿರಸ್ಕರಿಸಿದೆ.

- Advertisement -

ಆರೋಪಿಗಳ ಪರ ವಕೀಲರಾದ ಅಹ್ಮದ್ ನ್ಯಾಯಾಲಯದಲ್ಲಿ ವಾದಿಸಿದ್ದರು. ಜಾಮೀನು ಅರ್ಜಿಯ ಮುಂದಿನ ವಿಚಾರಣೆಯು ಅಕ್ಟೋಬರ್ 22 ರಂದು ನಡೆಯಲಿದೆ ಎಂದು ಅವರು ತಿಳಿಸಿದರು.



Join Whatsapp