ಲಕ್ನೋ: ಉತ್ತರ ಪ್ರದೇಶದ ಗೋರಖ್‍ನಾಥ್ ದೇವಾಲಯಕ್ಕೆ ಅತಿಕ್ರಮ ಪ್ರವೇಶಿಸಿದ ಪ್ರಕರಣದಲ್ಲಿ ಅಹ್ಮದ್ ಮುರ್ತಝಾ ಅಬ್ಬಾಸಿ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿದೆ.
ಆರೋಪಿಯ ಪೊಲೀಸ್ ಕಸ್ಟಡಿ ಶನಿವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಇದೀಗ ಅಬ್ಬಾಸಿಯನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಯುಎಪಿಎ ಅನ್ವಯ ತನಿಖಾ ಸಂಸ್ಥೆಗಳು ಆರೋಪಿಯನ್ನು ಸುಧೀರ್ಘ ಅವಧಿಗೆ ವಶಕ್ಕೆ ಪಡೆಯಲು ಅವಕಾಶವಿದ್ದು, ಚಾರ್ಜ್‍ಶೀಟ್ ಸಲ್ಲಿಕೆಗೆ ಕೂಡಾ ವಿಸ್ತರಿತ ಅವಧಿ ಪಡೆಯಬಹುದಾಗಿದೆ.
ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಿದಾಗ ಉಗ್ರಗಾಮಿ ಸಂಘಟನೆಗೆ ನೆರವಿಗೆ ಸಂಬಂಧಿಸಿದ ಎಲೆಕ್ಟ್ರಾನಿಕ್ ಮತ್ತು ಹಣಕಾಸು ವ್ಯವಹಾರಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಯುಎಪಿಎ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಎಟಿಎಸ್ ಹೆಚ್ಚುವರಿ ಮಹಾ ನಿರ್ದೇಶಕ ನವೀನ್ ಅರೋರಾ ಹೇಳಿದ್ದಾರೆ.