ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಅದರ ಅಂಗಸಂಸ್ಥೆಗಳ ಮೇಲಿನ ನಿಷೇಧ ಎತ್ತಿಹಿಡಿದ ಯುಎಪಿಎ ಟ್ರಿಬ್ಯುನಲ್

Prasthutha|

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್’ಐ) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ಹೇರಿದ್ದ ನಿಷೇಧವನ್ನು ಯುಎಪಿಎ ಟ್ರಿಬ್ಯುನಲ್ ಎತ್ತಿ ಹಿಡಿದಿದೆ.

- Advertisement -


ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್’ಐ) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ನಿಷೇಧವನ್ನು ಪರಿಶೀಲಿಸಲು ಯುಎಪಿಎ ನ್ಯಾಯಮಂಡಳಿಯ ಅಧ್ಯಕ್ಷ ಅಧಿಕಾರಿಯಾಗಿ ನೇಮಕಗೊಂಡ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದಿದ್ದಾರೆ.


ಯಾವುದೇ ಸಂಘಟನೆಯನ್ನು ನಿಷೇಧ ಮಾಡಿದರೆ ಆರು ತಿಂಗಳೊಳಗೆ ನ್ಯಾಯಮಂಡಳಿಯು ನಿಷೇಧ ಸರಿಯೇ ತಪ್ಪೇ ಎಂಬುದನ್ನು ಪರಿಶೀಲಿಸಬೇಕಾಗುತ್ತದೆ. ಪಿಎಫ್’ಐ ನಿಷೇಧಗೊಂಡ ಬಳಿಕ ಕೇಂದ್ರ ಸರ್ಕಾರ, ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ ನ್ಯಾಯಮಂಡಳಿಯನ್ನು ಈ ಉದ್ದೇಶಕ್ಕಾಗಿ ರಚಿಸಿತ್ತು. ಇದೀಗ ವಾದ-ವಿವಾದ ಆಲಿಸಿದ ಬಳಿಕ ದಿನೇಶ್ ಕುಮಾರ್ ಈ ತೀರ್ಪು ನೀಡಿದ್ದಾರೆ.

- Advertisement -

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) 1967 ರ ಸೆಕ್ಷನ್ 3 (1) ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಮೂಲಕ ಗೃಹ ಸಚಿವಾಲಯವು ಸೆಪ್ಟೆಂಬರ್ 28 ರಂದು ಪಿಎಫ್’ಐ ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ನಿಷೇಧಿಸಿತ್ತು.

ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಮತ್ತು ವಕೀಲ ಎ.ವೆಂಕಟೇಶ್ ವಾದ ಮಂಡಿಸಿದ್ದರು.

Join Whatsapp