ಉಚ್ಚಿಲ | ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ: ಏಳು ಮೀನುಗಾರರ ರಕ್ಷಣೆ

Prasthutha|

ಪಡುಬಿದ್ರಿ(ಉಡುಪಿ): ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, ಏಳು ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಉಚ್ಚಿಲ ಸಮೀಪ ಸೋಮವಾರ ನಡೆದಿದೆ.

- Advertisement -

ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ನಿವಾಸಿ ವಿಮಲಾ ಸಿ. ಪುತ್ರನ್ ಮಾಲೀಕತ್ವದ ಶ್ರೀ ಗಿರಿಜಾ ದೋಣಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಹವಾಮಾನ ವೈಪರೀತ್ಯದಿಂದ ಕಡಲು ಪ್ರಕ್ಷುಬ್ಧಗೊಂಡಿರುವ ಕಾರಣ ದೈತ್ಯ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮುಳುಗಡೆಯಾಗಿದೆ. ಬೋಟ್’ನಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು ರೂ. 6.5ಲಕ್ಷ ನಷ್ಟ ಸಂಭವಿಸಿದೆ .

ಸಮೀಪದಲ್ಲಿದ್ದ ಮೀನುಗಾರರು ನೆರವಿಗೆ ಧಾವಿಸಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಕಾಪು ಶಾಸಕ ಲಾಲಾಜಿ ಮೆಂಡನ್ ಮೀನುಗಾರರನ್ನು ಭೇಟಿ ನೀಡಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

- Advertisement -

ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Join Whatsapp