ನವದೆಹಲಿ: ರಾಜಸ್ತಾನದ ಉದಯಪುರದಲ್ಲಿ ಟೈಲರ್ ಒಬ್ಬರನ್ನು ಶಿರಚ್ಛೇದ ಮಾಡಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ ಐಎಗೆ ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವಾಲಯ, ಉದಯಪುರ ಘಟನೆಯ ತನಿಖೆಯನ್ನು ಎನ್ ಐಎಗೆ ವಹಿಸಲಾಗಿದೆ. ಘಟನೆಯ ಹಿಂದೆ ಯಾವುದಾದರೂ ಸಂಘಟನೆ ಮತ್ತು ಅಂತಾರಾಷ್ಟ್ರೀಯ ಕೈವಾಡವಿದೆಯೇ ಎಂಬುದರ ಕುರಿತು ತನಿಖಾ ಸಂಸ್ಥೆ ತನಿಖೆ ನಡೆಸಲಿದೆ ಎಂದು ಸಚಿವಾಲಯ ಟ್ವೀಟ್ ನಲ್ಲಿ ತಿಳಿಸಿದೆ.