Home ಟಾಪ್ ಸುದ್ದಿಗಳು ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ನವದೆಹಲಿ: ತಕ್ಷಣವೇ ಜಾರಿಗೆ ಬರುವಂತೆ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಿಸಲಾಗಿದೆ.

ಉದಯ್ ಭಾನು ಚಿಬ್ ಅವರು ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಬಿ.ವಿ. ಶ್ರೀನಿವಾಸ್ ಅವರು ಇದುವರೆಗೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version