ಕೋಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ

Prasthutha|

ನವದೆಹಲಿ: ಕೋಟಕ್ ಮಹೀಂದ್ರ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ಅವರು ರಾಜೀನಾಮೆ ನೀಡಿದ್ದಾರೆ. ಈ ಕುರಿತು ಬ್ಯಾಂಕ್ ಷೇರುಪೇಟೆಗೆ ಶನಿವಾರ ಮಾಹಿತಿ ನೀಡಿದೆ.

- Advertisement -


ಸೆಪ್ಟೆಂಬರ್ 1ರಿಂದಲೇ ಅವರು ಈ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಸೆಪ್ಟೆಂಬರ್ 2 ರಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ. ಆದಾಗ್ಯೂ, ಕೋಟಕ್ ಅವರು ಬ್ಯಾಂಕ್ನ ನಾನ್ ಎಕ್ಸಿಕ್ಯೂಟಿವ್ ನಿರ್ದೇಶಕರಾಗಿ ಮುಂದುವರಿಯುತ್ತಾರೆ ಎಂದು ಅದು ಹೇಳಿದೆ. ಬ್ಯಾಂಕ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಉದಯ್ ಕೋಟಕ್ ಅವರ ಅಧಿಕಾರಾವಧಿಯು ಡಿಸೆಂಬರ್ 31, 2023 ರಂದು ಕೊನೆಗೊಳ್ಳುತ್ತದೆ. ಇದೀಗ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಆರ್ಬಿಐ ಮತ್ತು ಬ್ಯಾಂಕ್ ಸದಸ್ಯರ ಅನುಮೋದನೆಗೆ ಒಳಪಟ್ಟು ಡಿಸೆಂಬರ್ 31 ರವರೆಗೆ ಎಂಡಿ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಅದು ಹೇಳಿದೆ.
ಅವರ ರಾಜೀನಾಮೆಗೆ ಕಾರಣ ತಿಳಿಸಿಲ್ಲ. ಇಂದಿನಿಂದಲೇ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp