ಉದಯಪುರ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದವರು ಬಿಜೆಪಿ ಕಾರ್ಯಕರ್ತರು: ತನಿಖಾ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Prasthutha|

- Advertisement -

ಉದಯಪುರ: ಇಲ್ಲಿನ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆ ಆರೋಪಿಗಳು ಬಿಜೆಪಿ ಕಾರ್ಯಕರ್ತರು ಎಂಬುದು ಬೆಳಕಿಗೆ ಬಂದಿದೆ.
ಇಂಡಿಯಾ ಟುಡೇ ನಡೆಸಿರುವ ತನಿಖಾ ವರದಿಯಲ್ಲಿ ಈ ಸ್ಫೋಟಕ ಅಂಶ ತಿಳಿದುಬಂದಿದೆ.


ಪ್ರವಾದಿ ನಿಂದನೆಗೈದ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಕನ್ನಯ್ಯ ಲಾಲ್ ಅವರನ್ನು ಹತ್ಯೆಗೈದು ಅದರ ವಿಡಿಯೋ ವೈರಲ್ ಮಾಡಿದ ಆರೋಪಿಗಳಾದ ರಿಯಾಝ್ ಹಾಗೂ ಮಹಮ್ಮದ್ , ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಆರೋಪಿ ರಿಯಾಝ್ ರಾಜಸ್ಥಾನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದರು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡ ಇರ್ಷಾದ್ ಚೈನಾವಾಲ ಹೇಳಿರುವುದನ್ನು ಇಂಡಿಯಾ ಟುಡೇ ಪ್ರಸಾರ ಮಾಡಿದೆ.

- Advertisement -

ಅವರಿಬ್ಬರೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು. ರಿಯಾಝ್ ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮತ್ತು ಪಕ್ಷದ ನಾಯಕರೊಂದಿಗೆ ಇರುವ ಫೋಟೋಗಳನ್ನು ಕೂಡ ವಾಹಿನಿ ಪ್ರಸಾರ ಮಾಡಿದೆ.


ಹತ್ಯೆ ಖಂಡಿಸಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲೆ ಈ ಮಾಹಿತಿ ಹೊರಬಿದ್ದಿದೆ.

Join Whatsapp