ದ್ರೌಪದಿ ಮುರ್ಮುಗೆ ಬೆಂಬಲ ಸೂಚಿಸಲು ಉದ್ಧವ್ ಠಾಕ್ರೆ ಮೇಲೆ ತೀವ್ರ ಒತ್ತಡ: ಯಶವಂತ್ ಸಿನ್ಹಾ ಆರೋಪ

Prasthutha|

ಮುಂಬೈ: ರಾಷ್ಟ್ರಪತಿ ಚುನಾವಣೆಯಲ್ಲಿ NDA ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಶಿವಸೇನಾ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಬಲವಂತಪಡಿಸಲಾಗುತ್ತಿದೆ ಎಂದು ವಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಆರೋಪಿಸಿದ್ದಾರೆ.

- Advertisement -

ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಡೆದ ಮಾತನಾಡಿದ ಅವರು, ನಾನು ಯಾವುದೇ ಪಕ್ಷದ ವಿರುದ್ಧ ಹೋರಾಡುತ್ತಿಲ್ಲ. ಆದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ ಎಂದು ತಿಳಿಸಿದರು.

ಉದ್ಧವ್ ಠಾಕ್ರೆ ಅವರು ಈ ಹಿಂದೆ ವಿಪಕ್ಷಗಳ ಜಂಟಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರು. ಆದರೆ ಶಿವಸೇನೆಯ 16 ಜನಪ್ರತಿನಿಧಿಗಳು, ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಮುರ್ಮು ಅವರನ್ನು ಬೆಂಬಲಿಸುವಂತೆ ಬಲವಂತಪಡಿಸಿದ್ದರು ಎಂದು ಅವರು ಸಾಂದರ್ಭಿಕವಾಗಿ ತಿಳಿಸಿದರು.

- Advertisement -

ಈ ಮಧ್ಯೆ ರಾಷ್ಟ್ರಪತಿ ಚುನಾವಣೆಗೂ ಮೊದಲು ಪ್ರತಿಪಕ್ಷಗಳನ್ನು ದುರ್ಬಲ ಮಾಡಲು ಕೇಂದ್ರ ಸರ್ಕಾರ ಎಲ್ಲಾ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ ಪಡಿಸುತ್ತಿದೆ. ಸೆಂಟ್ರಲ್ ಏಜೆನ್ಸಿಗಳನ್ನು ಉಪಯೋಗಿಸಿಕೊಂಡು ಸರ್ಕಾರಗಳನ್ನು ಕೆಡವಲಾಗುತ್ತಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.



Join Whatsapp