ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ಸೇರಿಸುತ್ತೇವೆ : ಉದ್ಧವ್ ಠಾಕ್ರೆ ವಿವಾದ

Prasthutha|

ಮುಂಬೈ : ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ಸೇರಿಸುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದಾಗಿ ವರದಿಯಾಗಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

- Advertisement -

ಮರಾಠ ಭಾಷಿಕರ ಪ್ರದೇಶ ಹಾಗೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ. ಅಲ್ಲಿ ವರೆಗೂ ನಾನು ಸುಮ್ಮನೆ ಕೂರುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾವು ನ್ಯಾಯಾಂಗ ನಿಂದನೆ ಮಾಡ್ತಿಲ್ಲ. ಕರ್ನಾಟಕ ಸರಕಾರದಿಂದಲೇ ಆ ಕೆಲಸವಾಗ್ತಿದೆ. ಬೆಳಗಾಂವ್ ಅನ್ನು ಬೆಳಗಾವಿ ಎಂದು ಮರುನಾಮಕರಣ ಮಾಡಲಾಗಿದ್ದು, ಸುವರ್ಣಸೌಧ ಕಟ್ಟಿಸಿ ಅಧಿವೇಶನ ನಡೆಸುತ್ತಿದ್ದಾರೆ. ಬೆಳಗಾವಿಯನ್ನು ಎರಡನೇ ರಾಜಧಾನಿ ಅಂತ ಘೋಷಿಸಿದ್ದಾರೆ. ಇದು ನ್ಯಾಯಾಂಗ ನಿಂದನೆ ಅಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -

ಕರ್ನಾಟಕದ ಎಲ್ಲಾ ಸರಕಾರಗಳಿಂದ ಮರಾಠಿಗರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಭಾಷಾವಾರು ಪ್ರಾಂತ್ಯ ರಚನೆ ವೇಳೆ ಅನ್ಯಾಯವಾಗಿದೆ. ಕನ್ನಡಿಗರ ದೌರ್ಜನ್ಯ ನಾವು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Join Whatsapp