Home ಟಾಪ್ ಸುದ್ದಿಗಳು ಜೀವ ಬೆದರಿಕೆಗೆ ಚಿಂತಿಸುವುದಿಲ್ಲ: ಉದಯನಿಧಿ ಸ್ಟಾಲಿನ್

ಜೀವ ಬೆದರಿಕೆಗೆ ಚಿಂತಿಸುವುದಿಲ್ಲ: ಉದಯನಿಧಿ ಸ್ಟಾಲಿನ್

ಚೆನ್ನೈ: ಅಯೋಧ್ಯಾ ತಪಸ್ವಿ ಛಾವನಿಯ ಮಹಾಂತ ಪರಮಹಂಸ ದಾಸ್ ತಮಗೆ ಜೀವ ಬೆದರಿಕೆ ಒಡ್ಡಿರುವ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಜೀವ ಬೆದರಿಕೆಗೆ ಚಿಂತಿಸುವುದಿಲ್ಲ ಎಂದು ಹೇಳಿದ್ದಾರೆ.


ಪ್ರತಿಕ್ರಿಯಿಸಿರುವ ಅವರು, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು. ಈ ರೀತಿಯ ಬೆದರಿಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ”. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನ ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾತಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Join Whatsapp
Exit mobile version