- Advertisement -
ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿ ಪ್ರವೀಣ್ ಚೌಗಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.