ಮಂಗಳೂರು ಏರ್ ಪೋರ್ಟಿ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ
ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ
ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೇವಲ 10 ನಿಮಿಷದಲ್ಲಿ ಕೊಲೆ ಮಾಡಿ ಪರಾರಿ ಆಗಿದ್ದನು.
ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ.
ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ.
ಈತ ಸಿಆರ್ಪಿಎಫ್ ಸಿಬ್ಬಂದಿಯಾಗಿದ್ದ ಎಂದು ವರದಿಯಾಗಿದೆ. ಮಂಗಳೂರು ಏರ್ಪೋರ್ಟಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ದೊರಕಿದೆ. ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿದೆ