Home ಕರಾವಳಿ ಉಡುಪಿ | ಸಮುದ್ರಕ್ಕೆ ಬಿದ್ದ ಕಾರು: ಓರ್ವ ಸಾವು, ಇನ್ನೋರ್ವನಿಗಾಗಿ ಹುಡುಕಾಟ

ಉಡುಪಿ | ಸಮುದ್ರಕ್ಕೆ ಬಿದ್ದ ಕಾರು: ಓರ್ವ ಸಾವು, ಇನ್ನೋರ್ವನಿಗಾಗಿ ಹುಡುಕಾಟ


ಉಡುಪಿ: ಕಾರೊಂದು ಸಮುದ್ರಕ್ಕೆ ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರದಲ್ಲಿ ಸಂಭವಿಸಿದೆ.

ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಅಗ್ನಿಶಾಮಕದಳ, ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ‌.

ಗಾಳಿ ಮಳೆಗೆ ರಸ್ತೆ ಕಾಣದೆ ಕಾರು ಸಮುದ್ರಕ್ಕೆ ಇಳಿದಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp
Exit mobile version