ಉಡುಪಿ: ಬಿಜೆಪಿ ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್

Prasthutha|

ಉಡುಪಿ: ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು ದಿನಾಂಕವಷ್ಟೇ ಬಾಕಿಯಿದೆ ಎಂದು ತಿಳಿದು ಬಂದಿದೆ.

- Advertisement -

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ನಿಂತುಕೊಂಡಿರುವ ಫೋಟೋ ವೈರಲ್ ಆಗಿದೆ.

ಕಳೆದ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ವರ್ತನೆಗೆ ಬೇಸರಗೊಂಡಿದ ಬಿ.ಎಂ.ಎಸ್. ಪಕ್ಷದ ಚಟುವಟಿಕೆಯಿಂದ ಹೊರಗುಳಿದಿದ್ದರು. ಆದರೆ ಚುನಾವಣೆ ಸಂದರ್ಭ ಕಾಂಗ್ರೆಸ್ ಗೆ ಪರೋಕ್ಷ ಬೆಂಬಲ ನೀಡಿದ್ದರು ಎನ್ನುವ ಆರೋಪವೂ ಕೇಳಿ ಬಂದಿತ್ತು.

Join Whatsapp