ಉಡುಪಿ: ಶಾಲಾ ಕ್ರೀಡಾಕೂಟದ ಸರ್ವಧರ್ಮ ಪ್ರಾರ್ಥನೆಯಲ್ಲಿ ಆಝಾನ್ ಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯಲ್ಲಿ ನಡೆದಿದೆ.
ಆಝಾನ್ ಗೆ ನೃತ್ಯ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತವಾಗಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೋರಿದೆ.
ಉಡುಪಿಯ ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯಲ್ಲಿ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿತ್ತು. ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಧರ್ಮದ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆಝಾನ್ ಗೆ ನೃತ್ಯ ಮಾಡಿದ್ದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಗದ್ದಲ ಏರ್ಪಟ್ಟ ಬಳಿಕ ವಿಡಿಯೋ ಮೂಲಕ ಆಡಳಿತ ಮಂಡಳಿ ಕ್ಷಮೆ ಯಾಚಿಸಿದೆ.