ಉಡುಪಿ: ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿಯ ಮೃತದೇಹ ಪತ್ತೆ

Prasthutha|

ಉಡುಪಿ: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿಯ ಮೃತದೇಹ ಮೂರು ದಿನದ ಬಳಿಕ ಬುಧವಾರ ಪತ್ತೆಯಾಗಿದೆ.

- Advertisement -


ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಇಂದು ಸಂಜೆ ಸಂಕದ ಸಮೀಪದಲ್ಲಿ ಪತ್ತೆಯಾಗಿದೆ.


ಸೋಮವಾರ ಸಂಜೆ ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ, ಸಾರ್ವಜನಿಕರು ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೂರು ದಿನಗಳ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ.

Join Whatsapp