ಉಡುಪಿ | ಹೆದ್ದಾರಿಯಲ್ಲಿ ಕಮರಿಗೆ ಬಿದ್ದ ಬಸ್ !

Prasthutha|

ಉಡುಪಿ: ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

- Advertisement -


ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


ಪಡುಬಿದ್ರೆ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Join Whatsapp