ಉಡುಪಿ ಪ್ರಕರಣ | ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಬೆಂಗಳೂರು: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.


ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.



Join Whatsapp