ಉಡುಪಿ: ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಮನೆಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸದಾಶಿವನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಮಹಿಳಾ ಬಿಜೆಪಿ ಕಾರ್ಯಕರ್ತರು, ಶಾಸಕ ಡಾ. ಅಶ್ವಥ್ ನಾರಾಯಣ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.