ಉಡುಪಿ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

Prasthutha|

ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

- Advertisement -


ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.


ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

- Advertisement -

ಅಲ್ಲದೆ, ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತಿಗಳನ್ನು ನ್ಯಾಯಾಲಯ ವಿಧಿಸಿದೆ.

Join Whatsapp