ಉಡುಪಿ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ವಿವಿಧ ಮುಸ್ಲಿಂ ಸಂಘಟನೆಗಳು ಕರೆ ನೀಡಿದ ಬಂದ್ ಗೆ ಉಡುಪಿಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಮುಸ್ಲಿಮ್ ವ್ಯಾಪಾರಿಗಳು ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ವಿನಂತಿಸಿತ್ತು. ಅದರಂತೆ ಜಿಲ್ಲೆಯ ಉಡುಪಿ ನಗರ, ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಪಡುಬಿದ್ರೆ, ಶಿರ್ವಗಳಲ್ಲಿ ಮುಸ್ಲಿಮರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.
ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗಳು ಸಂಚಾರ ನಿಲ್ಲಿಸಿ ಬಂದ್’ಗೆ ಬೆಂಬಲ ಸೂಚಿಸಿವೆ.