ಉಡುಪಿ: ದಲಿತ ಯುವಕನ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ಪೊಲೀಸರಿಂದ ಲಾಠಿ ಚಾರ್ಜ್ !

Prasthutha|

ಕೋಟ:  ದಲಿತ ಯುವಕನ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಬಾರಿಕೆರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

- Advertisement -

ರಾಜೇಶ್ ಎನ್ನುವಾತನಿಗೆ ಗುರುವಾರ ಮದುವೆ ನಡೆಯಬೇಕಿದ್ದು, ಈ ಪ್ರಯುಕ್ತ ವರನ ಮನೆಯಲ್ಲಿ ಸೋಮವಾರ ಮೆಹಂದಿ ಕಾರ್ಯಕ್ರಮ ನಡೆಯುತಿತ್ತು. ಈ ಸಂದರ್ಭ ಡಿಜೆ ಶಬ್ಧದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರೋರ್ವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಏಕಾಏಕಿ ಮದುವೆ ಮನೆಗೆ ನುಗ್ಗಿದ ಪೊಲೀಸರು ಮಹಿಳೆಯರು, ಮಕ್ಕಳು ಹಾಗೂ ವರನ ಸಹಿತ ಎಲ್ಲರ ಮೇಲೂ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ.

ಲಾಠಿಚಾರ್ಜ್ ನಿಂದ 9 ಮಂದಿ ಗಾಯಗೊಂಡಿದ್ದು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

- Advertisement -

ಈ ಘಟನೆ ಅತ್ಯಂತ ಅಮಾನವೀಯ ಮತ್ತು ಹೇಯವಾದದ್ದು. ಆದ್ದರಿಂದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ  ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

Join Whatsapp