ಕರ್ಫ್ಯೂ – ಲಾಕ್ ಡೌನ್ ಮಧ್ಯೆ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ !

Prasthutha|

►ಮಾಸ್ಕ್ ಇಲ್ಲ, ಸುರಕ್ಷಿತ ಅಂತರವೂ ಇಲ್ಲ !

- Advertisement -

ಉಡುಪಿ : ಸಾರ್ವಜನಿಕರಿಗೆ ಮಾಸ್ಕ್ ಮತ್ತು ಸುರಕ್ಷಿತ ಅಂತರದ ಪಾಠ ಮಾಡುತ್ತಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಉಡುಪಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕುರಿತಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರ ಫೋಟೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿಯವರ ಮಗಳ ಮದುವೆ ಎಪ್ರಿಲ್ 25 ರಂದು ನಡೆಯಲಿದ್ದು, ಅದರ ಮೆಹಂದಿ ನಿನ್ನೆ ರಾತ್ರಿ ನಡೆದಿತ್ತು.ನಡೆದಿತ್ತು. ಜಿಲ್ಲಾಧಿಕಾರಿ ಜಗದೀಶ್ ಅವರು ತಮ್ಮ ಕುಟುಂಬ ಸಮೇತರಾಗಿ ಹಾಜರಾಗಿದ್ದರು.

ಆದರೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಯಾವುದೇ ಮಾಸ್ಕ್ ಆಗಲಿ, ಸುರಕ್ಷಿತ ಸಾಮಾಜಿಕ ಅಂತರವಾಗಲಿ ಪಾಲಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದೆ. ಇತ್ತೀಚೆಗೆ ಉಡುಪಿಯಲ್ಲಿ ಸಾಮಾಜಿಕ ಅಂತರ ಕಾಪಾಡಲಿಲ್ಲವೆಂಬ ಕಾರಣಕ್ಕಾಗಿ ಬಸ್ಸಿನಲ್ಲಿ ಇದ್ದ ವಿದ್ಯಾರ್ಥಿಗಳನ್ನು ಕೂಡಾ ಕೆಳಗಿಳಿಸಿ ಹೋಗಿದ್ದರು. ಇದನ್ನು ಉಲ್ಲೇಖಿಸಿ ಕೂಡಾ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಸರಕಾರದ ನೂತನ ಮಾರ್ಗಸೂಚಿ ಪ್ರಕಾರ ಮದುವೆಗೆ 50 ಮಂದಿ ಭಾಗವಹಿಸುವ ಅವಕಾಶವಿದೆ. ಆದರೆ ಮಹೆಂದಿ ಕಾರ್ಯಕ್ರಮದ ಕುರಿತು ಸ್ಪಷ್ಟವಾದ ಉಲ್ಲೇಖವಿಲ್ಲ.

Join Whatsapp