ಇನ್ನು ಮುಂದೆ ಮಾಸ್ಕ್ ಧರಿಸದೇ ಓಡಾಡಿದರೆ ಕಡ್ಡಾಯ ಕೋವಿಡ್ ಟೆಸ್ಟ್| ಉಡುಪಿ ಜಿಲ್ಲಾಧಿಕಾರಿ

Prasthutha|

ಉಡುಪಿ : ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಲು ನಿರ್ಧರಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಜಿಲ್ಲೆಯಲ್ಲಿ ಕೊರೋನ ಸಂಬಂಧಿತ ನಿಯಮಗಳನ್ನು ಅನುಷ್ಠಾನ ಗೊಳಿಸಲು ಜಿಲ್ಲಾಧಿಕಾರಿಗಳಿಂದ ಅಧಿಕಾರ ಪ್ರತ್ಯಾಯೋಜಿಸಲ್ಪಟ್ಟ ಅಧಿಕಾರಿಗಳು, ಸಾರ್ವಜನಿಕರ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡು ವವರನ್ನು ಕಡ್ಡಾಯವಾಗಿ ಹತ್ತಿರದ ಕೋವಿಡ್-19 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲು ಮತ್ತು ಅಂತಹ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ತಾಲೂಕು ವೈದ್ಯಾಧಿಕಾರಿಗಳಿಗೆ ನೀಡಲು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರತಿರೋಧ ಒಡ್ಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

Join Whatsapp