ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಪತ್ನಿ, ಪ್ರಿಯಕರ ಮತ್ತು ಮಗ ದೋಷಿಗಳು

Prasthutha|

ಉಡುಪಿ: 2016 ರ ಜುಲೈನಲ್ಲಿ ಕರಾವಳಿಗರನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

- Advertisement -

ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ.

ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಕೊಲೆ ನಡೆದು 5 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಲಿದೆ.

- Advertisement -

ಘಟನೆ ಹಿನ್ನಲೆ:  ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ 2016 ರ ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ನಾಪತ್ತೆಯಾಗಿದ್ದರು.  ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂದಿತ್ತು. ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.



Join Whatsapp