ಉಡುಪಿ ಜಿಲ್ಲೆಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ | ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Prasthutha|

ಉಡುಪಿ : ಕೋವಿಡ್ – 19 ಸೋಂಕು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿನ ಪ್ರಮಾಣವನ್ನು ಕಡಿಮೆಗೊಳಿಸಲು ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂವನ್ನು ಮತ್ತೆ ವಿಧಿಸಲಾಗಿದೆ. ಈ ಕರ್ಫ್ಯೂ ಉಡುಪಿ ಜಿಲ್ಲೆಯಾದ್ಯಂತ ರಾತ್ರಿ 10:00ರಿಂದ ಮರುದಿನ ಬೆಳಗ್ಗೆ 5:00ರವರೆಗೆ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಈ ಆದೇಶ ಹೊರಡಿಸಿದ್ದಾರೆ.

- Advertisement -

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ನಡುವೆ ಅಗತ್ಯ ಚಟುವಟಿಕೆಗಳನ್ನು ಹೊರತು ಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಉಳಿದಂತೆ ಕೋವಿಡ್-19ರ ಹಿಂದಿನ ಎಲ್ಲಾ ಮಾರ್ಗಸೂಚಿಗಳು ಜಾರಿಯಲ್ಲಿರುತ್ತದೆ.

ರೋಗಿಗಳಿಗೆ, ವೈದ್ಯಕೀಯ ಸೇವೆ , ಬಸ್ ಸೇವೆಗಳು, ರೈಲುಗಳು ಹಾಗೂ ವಿಮಾನ ಪ್ರಯಾಣಕ್ಕೆ ಅವಕಾಶವಿದೆ. ಅನಿವಾರ್ಯ ಸಂಧರ್ಭಗಳಲ್ಲಿ ಸಾರಿಗೆ ವಾಹನ, ಖಾಸಗಿ ವಾಹನ, ಟ್ಯಾಕ್ಸಿಗಳಲ್ಲಿ ತೆರಳಲು ಅನುಮತಿ ಇದೆ. ಆದರೆ ಸೂಕ್ತ ಪ್ರಯಾಣದ ದಾಖಲೆಗಳು, ಟಿಕೆಟ್‌ಗಳನ್ನು ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Join Whatsapp