ಉಡುಪಿ ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ: ಕೊನೆಗೂ ಎಫ್ ಐಆರ್ ದಾಖಲು

Prasthutha|

ಉಡುಪಿ: ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶಿಸಿದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಉಡುಪಿ ಪೊಲೀಸರು ಕೊನೆಗೂ ಎಫ್ಐಆರ್ ದಾಖಲಿಸಿದ್ದಾರೆ.

- Advertisement -

ಉಡುಪಿಯಲ್ಲಿ ಅ.2ರಂದು ದುರ್ಗಾ ದೌಡ್ ಮೆರವಣಿಗೆ ನಡೆದಿತ್ತು. ಇದರಲ್ಲಿ ತಲವಾರು ಪ್ರದರ್ಶನ ಮಾಡಲಾಗಿತ್ತು. ಮಾತ್ರವಲ್ಲ ಸಾರ್ವಜನಿಕ ಸಭೆಯಲ್ಲಿ ಸಂಘಪರಿವಾರದ ಮುಖಂಡರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದರ ವಿರುದ್ಧ ಜಿಲ್ಲೆಯಲ್ಲಿ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಮಾತ್ರವಲ್ಲ ಪ್ರಕರಣ ದಾಖಲಿಸಲು ಒತ್ತಾಯಿಸಿದ್ದವು.

ಇದೀಗ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

- Advertisement -

ಉಡುಪಿ ನಿವಾಸಿ ಹುಸೈನ್ ಎಂಬವರು ಈ ಬಗ್ಗೆ ದೂರು ನೀಡಿದ್ದರು. ಅ.2ರಂದು ಮಧ್ಯಾಹ್ನ 3.30ಕ್ಕೆ ಕಡಿಯಾಳಿಯಿಂದ ಹೊರಟು ಉಡುಪಿ ನಗರದಲ್ಲಿ ಸಾಗಿದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಸುಮಾರು 10-15 ಮಂದಿಯ ಗುಂಪು ಅಕ್ರಮವಾಗಿ ಮಾರಕಾಸ್ತ್ರವಾದ ತಲವಾರು ಪ್ರದರ್ಶಿಸಿದ್ದು, ತ್ರೀವೇ ಸರ್ಕಲ್ ಬಳಿ ಆಗಮಿಸಿ ಮೆರವಣಿಗೆಯಲ್ಲಿ ತಲವಾರು ಹಿಡಿದು ತಾಲೀಮು ನಡೆಸಿ ಭಯ ಹುಟ್ಟಿಸುವ ದುಷ್ಕೃತ್ಯ ಎಸಗಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ಅದರಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಐಎಫ್ ಸಿ 1860(ಯು/ಎಸ್-143, 149), ಶಸ್ತ್ರಾಸ್ತ್ರ ಕಾಯ್ದೆ 1959(ಯು/ಎಸ್-27) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಚೋದನಾಕಾರಿಯಾಗಿ  ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಹಾಗೂ ಕಾಜಲ್ ಹಿಂದೂಸ್ಥಾನಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ 1850(ಯು/ಎಸ್-153ಎ, 34) ಯಂತೆ ಪ್ರಕರಣ ದಾಖಲಾಗಿದೆ.



Join Whatsapp