ಉಡುಪಿ: ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ

Prasthutha: December 20, 2021

ಉಡುಪಿ:  ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿ ತಂದೆಗೆ  ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿದೆ. ಅತ್ಯಾಚಾರ ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. 2020ರ ಮೇ ತಿಂಗಳಲ್ಲಿ ಉಡುಪಿಯಲ್ಲಿ 41 ವರ್ಷದ ವ್ಯಕ್ತಿ ತನ್ನ 14 ವರ್ಷದ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂಬುದಕ್ಕೆ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದಾರೆ.

ಮನೆಯಲ್ಲಿ ಹೆಂಡತಿ ಮತ್ತು ಮಗನಿಲ್ಲದ ಸಂದರ್ಭದಲ್ಲಿ ಮೊದಲ ಬಾರಿಗೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಒಬ್ಬಳೇ ಇದ್ದಾಗ ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ನೆರೆಹೊರೆ ಮನೆಯವರ ಸಹಾಯದಿಂದ ಬಾಲಕಿ ತನ್ನ ತಾಯಿಯ ಗಮನಕ್ಕೆ ತಂದು ಉಡುಪಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಳಿಕ ದೂರಿನ ಅನ್ವಯ ಆಕೆಯ ತಂದೆಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯಿದೆ ದಾಖಲಿಸಿದ್ದರು. ಅಂದಿನ  ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಸಿ ಕಿರಣ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು, ಘಟನೆಗೆ ಸಂಬಂಧಿಸಿ 11 ಸಾಕ್ಷಿಗಳ ವಿಚಾರಣೆಯನ್ನು ನಡೆಸಲಾಗಿತ್ತು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!