ಉಡುಪಿ: ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆಯ ಅಧಿಕಾರಿಗಳು

Prasthutha|

ಉಡುಪಿ: ಪೆರ್ಣಂಕಿಲ ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಾ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದಿದ್ದು, ಸದ್ಯ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -

ಚಿರತೆಯು ಪೆರ್ಣಂಕಿಲ ಗ್ರಾಮದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ.

ಚಿರತೆಗೆ ಬಲೆ ಬೀಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಬೋನು ಇರಿಸಿದ್ದು, ಕಳೆದ ರಾತ್ರಿ ಚಿರತೆಯು ಬೋನಿಗೆ ಬಿದ್ದಿದೆ. ಇಂದು ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಕೊಂಡೊಯ್ದಿದ್ದಾರೆ. ಇದರೊಂದಿಗೆ ಪೆರ್ಣಂಕಿಲ ಗ್ರಾಮಸ್ಥರ ಆತಂಕ ದೂರವಾಗಿದೆ.

Join Whatsapp