ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿಗಾಗಿ ತೀವ್ರ ಶೋಧ

Prasthutha|

►ಚಾಕು ಇರಿತಕ್ಕೊಳಗಾಗಿದ್ದ ಹಾಜಿರಾ ಡಿಸ್ಚಾರ್ಜ್

- Advertisement -

ಪ್ರತ್ಯಕ್ಷದರ್ಶಿ ಅಣ್ಣನ ಮಗಳಿಂದ ದೂರು


ಉಡುಪಿ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಪ್ರಕರಣ ಭೇದಿಸಲು ಪೊಲೀಸರು ಆಹೋ ರಾತ್ರಿ ಶ್ರಮ ಪಡುತ್ತಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪೊಲೀಸರ ಐದು ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

- Advertisement -


ಆರೋಪಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಸಿಳಿವು ಸಿಗದಂತೆ ಉಡುಪಿ ನಗರದೊಳಗೆ ನಾಲ್ಕು ಬಾರಿ ವಾಹನ ಬದಲಾಯಿಸಿ ಪರಾರಿಯಾಗಿದ್ದಾನೆ. ಇದರಿಂದ ಆರೋಪಿಯನ್ನು ಕಂಡುಹಿಡಿಯಲು ಪೊಲೀಸರಿಗೆ ಇದುವರೆಗೂ ಸಾಧ್ಯವಾಗಿಲ್ಲ. ಇದೀಗ ಕೊನೆ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಕೊಲೆಗಾರನ ಪತ್ತೆಗೆ ಬಲೆ ಬೀಸಿದ್ದಾರೆ.


ಹಣಕಾಸು ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಹಂತಕ ಸುಪಾರಿ ಕಿಲ್ಲರ್ ಎಂಬ ಅನುಮಾನ ವ್ಯಕ್ತವಾಗಿದೆ. ಆ ದಿಕ್ಕಿನಲ್ಲಿ ಪೊಲೀಸ್ ತಂಡ ತನಿಖೆ ಮುಂದುವರೆಸಿದೆ.

ಕೊಲೆಗೈದು ಪರಾರಿಯಾಗುತ್ತಿದ್ದ ಹಂತಕನನ್ನು ಪ್ರತ್ಯಕ್ಷದರ್ಶಿಯಾಗಿ ಕಂಡ ಮೃತ ಹಸೀನಾರ ಅಣ್ಣನ ಮಗಳು ಐಫಾ (24) ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 449, 302, 307, 324 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ನಾಲ್ವರ ಕಗ್ಗೊಲೆ ಘಟನೆಯಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಹಾಜಿರಾ ಎನ್ನುವ ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನವೆಂಬರ್ 12ರಂದು ಹಾಜಿರಾ ಸಹ ದುಷ್ಕರ್ಮಿ ಎರಡು ಕಡೆ ಚಾಕು ಇರಿದು ಪರಾರಿಯಾಗಿದ್ದ. ಇದೀಗ ಚಿಕತ್ಸೆ ಪಡೆದು ಮಣಿಪಾಲ ಕೆ.ಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ ನೀಡಿದ್ದಾರೆ.



Join Whatsapp