ಉಡುಪಿ | ನಾಲ್ವರ ಹತ್ಯೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

Prasthutha|

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹಿರಿಯ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

- Advertisement -

ಪ್ರಕಣದಲ್ಲಿ ಸಂಬಂಧಪಟ್ಟ ವಿಚಾರಣ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಸರಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ಮುಂದಿನ ಆದೇಶದವರೆಗೆ ನಿಯೋಜಿಸಿದೆ.

ಶಿವಪ್ರಸಾದ್ ಆಳ್ವ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸುವಂತೆ ಸಂತ್ರಸ್ತರ ಕುಟುಂಬ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿತ್ತು.



Join Whatsapp