ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಬಳಿಕ ಕೃತ್ಯದ ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ , ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ .ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ.ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದರು ಹೇಳಿದರು.
ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ.ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಪಡುತ್ತೇವೆ. ಉಡುಪಿ ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆ, ಇಂತಹ ಜಿಲ್ಲೆಯಲ್ಲಿ ಹೀಗಬಾರದಿತ್ತು.ಮುಂಜಾಗ್ರತಾ ಕ್ರಮ ಕೈಗೊಳ್ಖುತ್ತೇನೆ, ಕಾನೂನು ಸುವ್ಯವಸ್ಥಿತೆ ಕಾಪಾಡುತ್ತೇವೆ ಎಂದರು.