ಉಡುಪಿಯಲ್ಲಿ ಗ್ಯಾಂಗ್ ವಾರ್: ಇಬ್ಬರು ಆರೋಪಿಗಳ ಬಂಧನ

Prasthutha|

- Advertisement -

ಉಡುಪಿ: ನಡು ರಸ್ತೆಯಲ್ಲಿ ಗ್ಯಾಂಗ್ ವಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Join Whatsapp