ಉಡುಪಿ: ಆರನೇ ತರಗತಿಯ ವಿದ್ಯಾರ್ಥಿನಿಯೋರ್ವಳುಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು.
ಈಕೆ ಕಾಪುವಿನ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಆಕೆ ಉಪಯೋಗಿಸುತ್ತಿದ್ದ ಟ್ಯಾಬ್ ವಶಕ್ಕೆ ತೆಗೆದುಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.