Home ಕರಾವಳಿ ಉಡುಪಿ: ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿ

ಉಡುಪಿ: ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿ


ಉಡುಪಿ: ಸಂಕ ದಾಟುವಾಗ ಬಾಲಕಿಯೋರ್ವಳು ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ.

ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ನೀರುಪಾಲಾದ ವಿದ್ಯಾರ್ಥಿನಿ ಸನ್ನಿಧಿ ಬೊಳಂಬಳ್ಳಿ ಗ್ರಾಮದ ನಿವಾಸಿ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version