Home ಕರಾವಳಿ ಹಿಜಾಬ್ ನಿರಾಕರಣೆ: ಪರೀಕ್ಷೆ ಬರೆಯದೆ ವಾಪಸಾದ ಉಡುಪಿ ಹಿಜಾಬ್ ಹೋರಾಟಗಾರ್ತಿಯರು

ಹಿಜಾಬ್ ನಿರಾಕರಣೆ: ಪರೀಕ್ಷೆ ಬರೆಯದೆ ವಾಪಸಾದ ಉಡುಪಿ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ರಾಜ್ಯದಲ್ಲಿ ಹಿಜಾಬ್ ಪರ ಹೋರಾಟ ಮಾಡಿ ಸಂಚಲನ ಸೃಷ್ಟಿಸಿದ್ದ ಉಡುಪಿಯ ಹಿಜಾಬ್ ಹೋರಾಟಗಾರ್ತಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದೇ ಮನೆಗೆ ವಾಪಸಾಗಿದ್ದಾರೆ. ಆಡಳಿತ ಮಂಡಳಿಯ ಬಳಿ ವಿದ್ಯಾರ್ಥಿನಿಯರಾದ ಆಲಿಯಾ ಅಸಾದಿ ಮತ್ತು ರೇಷಂ ಹಿಜಾಬ್ ಧರಿಸಿ ಪರೀಕ್ಷೆಗೆ ಅನುಮತಿಸುವಂತೆ ಕೋರಿಕೊಂಡಿದ್ದಾರೆ. ಆದರೆ ಅನುಮತಿ ದೊರಕದ ಹಿನ್ನೆಲೆಯಲ್ಲಿ ಇಬ್ಬರೂ ವಾಪಸಾಗಿದ್ದಾರೆ.

ಹಿಜಾಬ್ ಧರಿಸಿ ಪರೀಕ್ಷೆಗೆ ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲರೊಂದಿಗೆ ಮನವಿ ಮಾಡಿದ್ದಾರೆ. ಆದರೆ ಪ್ರಾಂಶುಪಾಲರು ವಿದ್ಯಾರ್ಥಿನಿಯರ ಮನವಿಯನ್ನು ನಿರಾಕರಿಸಿದ್ದಾರೆ.

ಈ ಹಿಂದೆ ವಿದ್ಯಾರ್ಥಿನಿ ಆಲಿಯ ಅಸಾದಿ ‘ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆಗಳನ್ನು ಬರೆಯಲು ನಮಗೆ ಅವಕಾಶ ನೀಡುವ ನಿರ್ಧಾರವನ್ನು ನೀವು ತೆಗೆದುಕೊಳ್ಳಬಹುದು. ದಯವಿಟ್ಟು ಇದನ್ನು ಪರಿಗಣಿಸಿ. ನಾವು ಈ ದೇಶದ ಭವಿಷ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿಗೆ ಟ್ವೀಟ್ ಮೂಲಕ ವಿನಂತಿಸಿದ್ದಳು.

Join Whatsapp
Exit mobile version