ಉಡುಪಿ ವಿಡಿಯೋ ಪ್ರಕರಣ: ಕಾಲೇಜು ಆಡಳಿತ ಮಂಡಳಿಗೆ ನಿರೀಕ್ಷಣಾ ಜಾಮೀನು

Prasthutha|

ಉಡುಪಿ: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ನಾಲ್ಕನೇ ಆರೋಪಿಯಾಗಿರುವ ಉಡುಪಿಯ ನೇತ್ರಜ್ಯೋತಿ ಕಾಲೇಜು ಆಡಳಿತ ಮಂಡಳಿಯವರಿಗೆ ಜೆಎಂಎಫ್​ಸಿ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

- Advertisement -

ಪ್ರಕರಣ ಸಂಬಂಧ ಆಡಳಿತ ಮಂಡಳಿಯ ಪರವಾಗಿ ಕಾಲೇಜಿನ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದಕ್ಕೂ ಮುನ್ನ ಪ್ರಕರಣದ ಪ್ರಮುಖ ಮೂವರು ಆರೋಪಿಗಳಾಗಿರುವ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾಗೆ ಜಿಲ್ಲಾ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ.

- Advertisement -

ಕಾಲೇಜು ಆಡಳಿತ ಮಂಡಳಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ಮೊಬೈಲ್ ಜಪ್ತಿ ಮಾಡಿ ಪೊಲೀಸರ ವಶಕ್ಕೆ ನೀಡಿತ್ತು. ಮೊಬೈಲ್ ಜಾಲಡಿದರೂ ಏನು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Join Whatsapp